ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ರಮೇಶ ಜಾರಕಿಹೊಳಿ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ವಿಮಾನನಿಲ್ದಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತನಾಡಿ ಅವರಿಗಿರುವ ಅಸಮಾಧಾನವನ್ನು ಸರಿಪಡಿಸಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತಿಗೆ ನಾನು ಕಿಮ್ಮತ್ತು ಕೊಡಲ್ಲ. ಅವರಿಗೆ ಸತ್ಯ ಹೇಳಿಯೇ ಗೊತ್ತಿಲ್ಲ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಯಾಗುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಜನರು ಬಹುಮತ ಕೊಡಬೇಕಲ್ವ. ಆಸೆ ಇದ್ದರೆ ಎಲ್ಲವೂ ಆಗೋದಿಲ್ಲ. ಹೇಗಾದರೂ ಆಗೋಕಾಗುತ್ತಾ ಎಂದು ಅವರು ಪ್ರಶ್ನಿಸಿದರು.
ಲೋಕಸಭಾ ಚುನಾವಣೆಗೆ ನಾವು ಎಲ್ಲ ತಯಾರಿ ಮಾಡುತ್ತಿದ್ದೇವೆ ಎಂದ ಅವರು,ಎಐಸಿಸಿ ಅಧ್ಯಕ್ಷ ರಾಹುಲ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿಯನ್ನು ತಳ್ಳಿ ಹಾಕಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ