ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯ್ ದಾಸ್ ಅಲಿಯಾಸ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಬಾಂಗ್ಲಾ ವಲಸಿಗನಾಗಿದ್ದು, ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಮುಂಬೈ ಮಹಾನಗರ ಡಿಸಿಪಿ ದೀಕ್ಷಿತ್ ಗೆಡಮ್, ಬಂಧಿತ ಆರೋಪಿ ವಿಜಯ್ ದಾಸ್ ಬಾಂಗ್ಲಾ ಮೂಲದವನಾಗಿದ್ದು, ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ. ಹಾಗಾಗಿ ಪದೇ ಪದೇ ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ. ಕಳ್ಳತನ ಮಾಡುವುದೇ ಈತನ ಉದ್ದೇಶವಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಕಳೆದ 6-7 ತಿಂಗಳಿಂದ ಮುಂಬೈನ ಬೇರೆ ಬೇರೆ ಟೌನ್ ಗಳಲ್ಲಿ ನೆಲೆಸಿದ್ದ. 15 ದಿನಗಳಿಂದ ಮುಂಬೈ ನಗರದಲ್ಲಿದ್ದ. ಹೌಸ್ ಕೀಪಿಂಗ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ. ದರೋಡೆ ಮಾಡಲೆಂದೇ ಮನೆಗೆ ನುಗ್ಗಿದ್ದಾನೆ. ಈ ವೇಳೆ ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿದ್ದಾನೆ. ಸದ್ಯ ಆರೋಪಿಯನ್ನು ಜಡ್ಜ್ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ