Belagavi NewsBelgaum NewsKannada NewsKarnataka NewsNationalPolitics

*ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳುವುದಿಲ್ಲ: ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಡಿ ಪ್ರಕಟಿಸಿದ ತನಿಖೆಯಲ್ಲಿ ಸಿದ್ದರಾಮಯ್ಯ ಅಷ್ಟೆ ಅಲ್ಲದೆ ಬೇರೆ ಬೇರೆ ಸೈಟ್ ಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ ಇಡಿ ಕೆಲಸ ಮಾಡುತ್ತಿದೆ. ಮುಡಾ ಹಗರಣದಲ್ಲಿ ಸಿಬಿಐ ತನಿಖೆ ಮಾಡಲಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಆಗ್ರಹಿಸಿದರು. 

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಹಗರಣ ಬಂದ್ಮೇಲೆ ಎಷ್ಟೋ ದಿನಗಳ ನಂತರ ಮುಡಾ ಆಸ್ತಿಗಳು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.  ಯಾವುದೆ ಕಂಡೀಷನ್ ಇಲ್ಲದೆ ಸಿದ್ದರಾಮಯ್ಯ ಆಸ್ತಿ ಹಸ್ತಾಂತರ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತಪ್ಪು ಇದೆ, ಸಿಬಿಐ ತನಿಖೆ ಮಾಡಲಿ. ರಾಜ್ಯ ಕಾಂಗ್ರೆಸ್ ಅಧೀನದಲ್ಲಿರೋ ಲೋಕಾಯುಕ್ತ ತನಿಖೆಯಲ್ಲಿ ಅರ್ಥ ಇಲ್ಲ. ಸಿಎಂ‌ ಸಿದ್ದರಾಮಯ್ಯ ಇವತ್ತಲ್ಲ, ನಾಳೆ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗುತ್ತೆ. ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ, ರಾಜ್ಯ ಕಾಂಗ್ರೆಸ್ ನಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದರು. 

ಗಾಂಧಿ ಭಾರತ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಹೆದರಿ ಮುಡಾ ಆಸ್ತಿ ಮುಟ್ಟುಗೋಲು ಎಂಬ ಸುರ್ಜೇವಾಲಾ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹಣ ಖರ್ಚು ಮಾಡಿ ಗಾಂಧಿ ಭಾರತ ಸಮಾವೇಶ ಮಾಡ್ತಿದ್ದಾರೆ. ಸಮಾವೇಶದ ಬ್ಯಾನರ್ ಗಳಲ್ಲಿ ಕಾಂಗ್ರೆಸ್ ಲೀಡರ್, ಮರಿ ಲೀಡರ್, ಯುವ ಲೀಡರ್ ರಾರಾಜಿಸುತ್ತಿವೆ. ಬ್ಯಾನರ್ ಗಳಲ್ಲಿ ಮಹಾತ್ಮಾ ಗಾಂಧಿಜಿ ಪೋಟೋ ದುರ್ಬಿನ್ ಹಿಡಿದು ನೋಡಬೇಕು. ಸರ್ಕಾರದ ದುಡ್ಡಿನಲ್ಲಿ ಕಾರ್ಯಕ್ರಮ ಮಾಡಿ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ದಾರೆ. ಸುರ್ಜೇವಾಲಾ ಹೇಳಿಕೆಗೂ ಸಮಾವೇಶಕ್ಕೂ ಇಡಿ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದರು.

ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳುವುದಿಲ್ಲ. ನಮ್ಮಲ್ಲಿ ವ್ಯತ್ಯಾಸಗಳಿರುವುದು ನಿಜ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ವಯಕ್ತಿಕ ಆರೋಪಗಳ ಕುರಿತು ನಾನು ಮಾತನಾಡುವುದಿಲ್ಲ ಎಂದು ಶೆಟ್ಟರ್ ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button