ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧನ ಸಮಾವೇಶದ ಸಿದ್ಧತೆ ಪರಿಶೀಲನೆ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಶಾಸಕ ಫಿರೋಜ್ ಸೇಠ್ ನಿವಾಸಕ್ಕೆ ಭೇಟಿ ನೀಡಿದರು.
ಬೆಳಗಾವಿಯ ಹನುಮಾನ್ ನಗರದಲ್ಲಿರುವ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ತೆರಳಿ ಉಪಾಹಾರ ಸೇವಿಸಿದರು.
ಸಚಿವ ಡಾ ಎಂ ಸಿ ಸುಧಾಕರ್, ಶಾಸಕ ಅಸೀಫ್ ಸೇಠ್, ಎಂಎಲ್ಸಿಗಳಾದ ಎಸ್ ರವಿ, ಚನ್ನರಾಜ ಹಟ್ಟಿಹೊಳಿ ಹಾಗೂ ದುಂತೂರು ವಿಶ್ವನಾಥ್, ಮೃಣಾಳ್ ಹೆಬ್ಬಾಳ್ಕರ್ ಜತೆಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ