ಪ್ರಗತಿವಾಹಿನಿ ಸುದ್ದಿ: ಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ನಾನೂ ಹೋಗಬೇಕು ಎಂದುಕೊಂಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯ ಕಪಿಲೇಶ್ವರನ ದರ್ಶನ ಮಾಡಿದ ಬಳಿಕ ಮಾತನಾಡಿದ ಅವರು, ನಾನು ಈ ಬಾರಿ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ಹೋಗಬೇಕು ಎಂದು ಕೊಂಡಿರುವೆ. ಅಲ್ಲಿನ ಸರ್ಕಾರದವರು ಆಹ್ವಾನ ನೀಡಿದ್ದಾರೆ ಎಂದರು.
ಇನ್ನೂ ಹೋಗುವ ದಿನಾಂಕ ನಿಗದಿಯಾಗಿಲ್ಲ. ದೇವರ ಮೇಲೆ ಒಬ್ಬೊಬ್ಬರ ನಂಬಿಕೆ. ನಾನು ದೈವ ಭಕ್ತ. ಹಾಗಾಗಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಇಂದು ಪೂಜೆ ಸಲ್ಲಿಸಿದ್ದೇನೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ