Film & Entertainment

*ಕಾಂತಾರ-2 ಸಿನಿಮಾ ತಂಡದಿಂದ ಅರಣ್ಯ ಪ್ರದೇಶಕ್ಕೆ ಹಾನಿ ಆರೋಪ*

ಪ್ರಗತಿವಾಹಿನಿ ಸುದ್ದಿ: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ-2 ಸಿನಿಮಾ ಚಿತ್ರೀಕರಣಕ್ಕಾಗಿ ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಹಾಸನ ಜಿಲ್ಲೆಯ ಸಕಲೇಶಪುರದ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಂತಾರಾ-2 ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜನವರಿ 2ರಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಗೋಮಾಳ ಜಾಗದಲ್ಲಿ ಶೂಟಿಂಗ್ ಗಾಗಿ ಚಿತ್ರ ತಂಡ ಪರವಾನಗಿ ಪಡೆದಿದೆ. ಆದರೆ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಾಕಿ ಚಿತ್ರೀಕರಣ ಮಡಲಾಗುತ್ತಿರುವುದರಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗುತ್ತಿದೆ.

Home add -Advt

ಅಲ್ಲದೇ ಕಾಡ್ಗಿಚ್ಚಿನಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Related Articles

Back to top button