ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.
ಬಸ್ ಕೊಳ್ಳೆಗಾಲದಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಹೊಡೆದು ಪಲ್ಟಿಯಾಗಿ ಬಿದ್ದಿದೆ. 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ