ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 18 ವರ್ಷದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೈಥಿಲಿ (18) ಮೃತ ವಿದ್ಯಾರ್ಥಿನಿ. ಸರ್ಕರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದ ವಿದ್ಯಾರ್ಥಿನಿ ಮೈಥಿಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಾಲೇಜಿಗೆ ಬಂದು ತರಗತಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಚಳ್ಳಕೆರೆ ಕ್ರಾಸ್ ಬಳಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ