ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಅವಿನಾಶ್ (24), ಅಭಿಷೇಕ್ (26) ಹಾಗೂ ಸಂಜೀವ್ (40) ಸೇರಿ ಮೂವರು ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೀದರ್ ನಿಂದ ತೆಲಂಗಾಣದ ಧಾರೂರ್ ಗೆ ತೆರಳುತ್ತಿದ್ದ ಕಾರು ತೆಲಂಗಾಣದಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿಹೊಡೆದು ಈ ದುರಂತ ಸಂಭವಿಸಿದೆ. ಕುಂಚಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ