Karnataka News

*ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್ | Bank Robbery Case*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜ.17ರಂದು ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ನ ಚಿನ್ನಾಭರಣ, ನಗದು ಹಣವನ್ನು ದರೋಡೆಕೋರರು ದೋಚಿ ಪರಾರಿಯಾಗಿದ್ದರು. ಪ್ರಕರಣ ಸಂಅಬ್ಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳುರು ಕಮಿಷ್ನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಬ್ಯಾಂಕ್ ದರೋಡೆ ಬಳಿಕ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button