ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರನ ಆರೋಪಿ ನಟ ದರ್ಶನ್ ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ಗನ್ ಲೈಸನ್ಸ್ ರದ್ದುಕೊಳಿಸುವಂತೆ ಆಂತರಿಕ ಇಲಖೆ ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರಿಗೆ ಸೂಚನೆ ನೀಡಿದೆ.
ದರ್ಶನ್ ಬಳಿ ಇರುವ ಎರಡು ಗನ್ ಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಕರಣದ ಟ್ರಯಲ್ ಮುಗಿಯುವವರೆಗೂ ಗನ್ ಲೈಸನ್ಸ್ ಅಮಾನತು ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ