ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಧೂತ ವಿನಯ್ ಗುರೂಜಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಚಿಕ್ಕಮಗಳೂರಿನ ಗೌರಿಗದ್ದೆಯ ಅವಧೂತರಾದ ವಿನಯ ಗುರೂಜಿರವರು ಇಂದು ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಆಶೀರ್ವದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ