ಪ್ರಗತಿವಾಹಿನಿ ಸುದ್ದಿ: ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಬಿದ್ದು 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಗುಳ್ಳಾಪುರದ ಬಳಿ ಘಟ್ಟ ಪ್ರದೇಶದಲ್ಲಿ ಲಾರಿ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂಜಾನೆ ಮಂಜು ಕವಿದ ವಾತಾವರಣ, ಘಟ್ಟ ಪ್ರದೇಶದಲ್ಲಿ ಲಾರಿ ಮುಂದಿನ ವಾಹನಕ್ಕೆ ಡಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ