ಮೃತರ ಕುಟುಂಬಕ್ಕೆ ಪರಿಹಾರದ ಭರವಸೆ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಬೆಳ್ಳಂಬೆಳಿಗ್ಗೆಯೇ ನಡೆದ ಸಾಲು ಸಾಲು ಅಪಘಾತ ಪ್ರಕರಣದಲ್ಲಿ ಒಟ್ಟು 14 ಜನರು ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು.
ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ