ಪ್ರಗತಿವಾಹಿನಿ ಸುದ್ದಿ: ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರುಗಳಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಉದಯ್, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ ಅವರುಗಳು ಸೇರಿದಂತೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಜನವರಿ 22ರ ಮಧ್ಯಾಹ್ನ 3.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರನ್ನು ಗೃಹ ಕಚೇರಿ ಕೃಷ್ಣ ದಲ್ಲಿ ಭೇಟಿ ಮಾಡಲಿದ್ದಾರೆ.
ಕಾವೇರಿ ಕೊಳ್ಳದ ಪ್ರಾಂತ್ಯಕ್ಕೆ ಕೃಷಿ ವಿಶ್ವವಿದ್ಯಾಲಯವನ್ನು ಮಂಡ್ಯದಲ್ಲಿ ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಕರ್ನಾಟಕ ರಾಜ್ಯದ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ 52 ಕೋಟಿ ರೂಪಾಯಿಗಳನ್ನು ಸಚಿವ ಸಂಪುಟ ಮನ್ನಾ ಮಾಡಿರುವುದರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಿಯೋಗ ಭೇಟಿ ಮಾಡಿ ಕಾವೇರಿ ಕೊಳ್ಳದ ರೈತರ ಪರವಾಗಿ ಅಭಿನಂದಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ