*ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ವದಂತಿ: ರಕ್ಷಿಸಿಕೊಳ್ಳಲು ಕೆಳಗಿದ ಪ್ರಯಾಣಿಕರ ಮೇಲೆ ಹರಿದ ಮತ್ತೊಂದು ರೈಲು: ಸ್ಥಳದಲ್ಲೇ ಹಲವರು ಸಾವು*
ಪ್ರಗತಿವಾಹಿನಿ ಸುದ್ದಿ: ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ವದಂತಿಯಿಂದ, ಬೆಂಕಿಯಿಂದ ಪಾರಾಗಲು ರೈಲು ಹಳಿ ಮೇಲೆ ಇಳಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ ಹಲವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದಿದೆ.
ಪುಷ್ಪಕ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅದರಲ್ಲಿದ್ದ ಪ್ರಯಾಣಿಕರು ತಮ್ಮ ಪ್ರಾಣ ರಕ್ಷಣೆಗಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಈ ವೇಳೆ ಹಲವರು ಪಕ್ಕದ ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದಿದ್ದು, ಇದೇ ಸಂದರ್ಭದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕರ್ನಾಟಕ ಎಕ್ಸ್ ಪ್ರೆಸ್ ರೈಲು ಆ ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪುಷ್ಪಕ್ ರೈಲಿನಲ್ಲಿದ್ದ ಪ್ರಯಾಣಿಕರು ಚೈನ್ ಎಳೆದಿದ್ದು, ಟ್ರೇನ್ ನಿಲ್ಲುವಷ್ಟರಲ್ಲೇ ಪ್ರಯಾಣಿಕರು ರೈಲು ಹಳಿ ಮೇಲೆ ಇಳಿದಿದ್ದರಿಂದ ಈ ದುರಂತ ಸಂಭವಿಸಿದೆ.
ಸ್ಥಳದಲ್ಲೇ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಿಖರ ಮಾಹಿತಿ ಲಭ್ಯವಾಗಿಲ್ಲ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಗುರುತು ಸಿಗದಷ್ಟರಮಟ್ಟಿಗೆ ಮೃತದೇಹ ಛಿದ್ರ ಛಿದ್ರಗೊಂಡಿದ್ದು, ಚಲ್ಲಾಪಿಲ್ಲಿಯಾಗಿ ಬಿದ್ದಿದೆ. ಘಟನಾಸ್ಥಳಕ್ಕೆ ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ