ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ನಿವೃತ್ತ ಸೈನಿಕ, ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಬತ್ಸಕರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ ಪೇಟ್ ನಲ್ಲಿ ಈ ಘಟನೆ ನಡೆದಿದೆ. ಗುರುಮೂರ್ತಿ ಎಂಬಾತ ಜ.18ರಂದು ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ರಾಚಕೊಂಡ ಕಮಿಷನರೇಟ್ ವ್ಯಾಪ್ತಿಯ ಮೀರ್ ಪೇಟ್ ಠಾಣೆಯಲ್ಲಿ ದೂರು ನೀಡಿದ್ದ.
ತನಿಖೆ ಆರಂಭಿಸಿದ ಪೊಲೀಸರು ಗುರುಮೂರ್ತಿಯನ್ನೇ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತಾನೇ ಮಾಡಿದ ಕೊಲೆ ರಹದ್ಸ್ಯ ಬಯಲು ಮಾಡಿದ್ದಾನೆ. ಪತ್ನಿಯನ್ನು ಕೊಂದು , ಶವನ್ನು ಕತ್ತರಿಸಿ, ಬಳಿಕ ಕುಕ್ಕರ್ ನಲ್ಲಿ ಬೇಯಿಸಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ. ಬಳಿಕ ಬೇಯಿಸಿದ ದೇಹದ ಭಾಗಗಳನ್ನು ಜಿಲ್ಲೆಲಗುಡಾದ ಕೆರೆಗೆ ಎಸೆದಿದ್ದಾಗಿ ತಿಳಿಸಿದ್ದಾನೆ.
ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಗುರುಮೂರ್ತಿ, ನಿವೃತ್ತಿ ಬಳಿಕ ಕಾಂಚನ್ ಭಾಗ್ ನಲ್ಲಿ ಆಡಿಆರ್ ಡಿಒ ದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸಮಾಡುತ್ತಿದ್ದರು. 13 ವರ್ಷಗಳ ಹಿಂದೆ ಮಾಧವಿ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದರು. ಇಷ್ಟಾಗ್ಯೂ ಪತ್ನಿ ಹತ್ಯೆ ಮಾಡಿದ್ದೂ ಅಲ್ಲದೇ ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿ ವಿಕೃತಿ ಮೆರೆದಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ