ಪ್ರಗತಿವಾಹಿನಿ ಸುದ್ದಿ: ಅನೈತಿಕ ಚಟುವಟಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಮ ಸೇನೆ ಕಾರ್ಯಕರ್ತರು ಮಂಗಳೂರಿನ ಮಸಾಜ್ ಸೆಂಟರ್ ಮೇಲೆ ಏಕಾಏಕಿ ದಾಳಿ ನಡೆಸಿ, ಅಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಮಸಾಜ್ ಸೆಂಟರ್ ಮೇಲೆ ಕಾರ್ಯಕರ್ತರು ದಾಳಿ ನಡೆಸಿದ್ದು, ಅಲ್ಲಿದ್ದ ಮಹಿಳಾ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಮಸಾಜ್ ಸೆಮ್ಟರ್ ನ ಗಾಜುಗಳನ್ನು, ಪೀಠೋಪಕರಣಗಳನ್ನು ದ್ವಂಸ ಮಾಡಿ, ಅಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿಗೊಳಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ