ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ, ವಕೀಲ ಜಗದೀಶ್ ಸದಾಕಾಲ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಅವರ ಮೇಲೆ ಹಲ್ಲೆ ನಡೆಸುವ ಯತ್ನ ನಡೆದಿದೆ ಎನ್ನಲಾಗಿದೆ.
ಬೆಂಗಳೂರಿನ ಕೋಡಿಗೆಹಳ್ಳಿಯ ವಿರೂಪಾಕ್ಷ ನಗರದಲ್ಲಿ ವಕೀಲ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಈ ಬಗ್ಗೆ ಅವರು ಕೋಡಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕೋಡಿಗೆಹಳ್ಳಿಯಲ್ಲಿ ಜಗದೀಶ್ ಅವರಿಗೆಸೇರಿದ ಕಾಂಪ್ಲೆಕ್ಸ್ ಇದ್ದು, ಇದೇರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿಯನ್ನು ಕೂರಿಸಲು ಪ್ಲಾನ್ ಮಡಿ ರಸ್ತೆ ಬ್ಲಾಕ್ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದ್ದು, ರಸ್ತೆ ಬ್ಲಾಕ್ ಮಡಿದರೆ ಸಾರ್ವಜನಿಕರು ಓಡಾಡುವುದದರೂ ಹೇಗೆ? ಹೀಗಾಗಿ ಇಲ್ಲಿ ರಸ್ತೆಯನ್ನು ಬ್ಲಾಕ್ ಮಾಡಿ ದೇವರನ್ನು ಕೂರಿಸಬಾರದು ಎಂದಿದ್ದಾರೆ. ಈಗಗಲೇ ಹಾಕಿರುವ ಪೆಂದಾಲ್ ತೆಗೆಯುವಂತೆ ಸೂಚಿಸಿದ್ದಾರೆ.
ಇದಕ್ಕೆ ಸ್ಥಳೀಯರು ಒಪ್ಪಿಲ್ಲ. ಕೆಲವರು ಗುಂಪುಕಟ್ಟಿಕೊಂಡು ಬಂದು ಜಗದೀಶ್ ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರಂತೆ. ಈ ಬಗ್ಗೆ ಜಗದೀಶ್ ಕೋಡಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ