Karnataka News

*ಭೀಕರ ಕಾರು ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

Home add -Advt

ವಿಜಯಪುರದ ಕನ್ನಾಳ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24) ರಾಜು ಬಿರಾದಾರ್ (23) ಎಂದು ಗುರುತಿಸಲಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button