Belagavi NewsBelgaum News

*ಬೆಳಗಾವಿ: ಮತ್ತೋರ್ವ ಬಾಣಂತಿ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬಾಣಂತಿ ಸಾವಿನ ಸರಣಿ ಮುಂದುವರೆದಂತಿದೆ, ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ಅಥಣಿ ಆಸ್ಪತ್ರೆಯಲ್ಲಿ ನಡೆದಿದೆ.

ಮುತ್ತವ್ವ ಸಂತೋಷ ಗೊಳಸಂಗಿ (21) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಮುತ್ತವ್ವ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಜನವರಿ 31ರಂದು ಮುತ್ತವ್ವಗೆ ಹೆರಿಗೆ ದಿನಾಂಕ ನೀಡಲಾಗಿತ್ತು. ಆದರೆ ಆಕೆಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಪಿ ವ್ಯತ್ಯಾಸ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲಾಗಿತ್ತು. ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವವಾಗಿ ಬಾಣಂತಿ ಅಸ್ವಸ್ಥರಾಗಿದ್ದರು. ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಹೇಳಿದ್ದರು. ಬೇರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮುತ್ತವ್ವ ಸಾವನ್ನಪ್ಪಿದ್ದಾರೆ. ಬಾಣಂತಿ ಸಾವಿಗೆ ವೈದ್ಯರ ಬೇಜವಾಬ್ದಾರಿಯೇ ಕಾರಣ ಎಂದು ಪೋಷಕರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button