ಪ್ರಗತಿವಾಹಿನಿ ಸುದ್ದಿ: ಮನೆ ಕೆಲಸದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ
ನಜ್ಮಾ ಕೊಲೆಯಾಗಿರುವ ಮಹಿಳೆ. ಬಾಂಗ್ಲಾ ಮೂಲದ ಪ್ರಜೆಯಾಗಿರುವ ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಇದೀನ ನಜ್ಮಾಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹಯೆಗೈದು ರಾಮಮೂರ್ತಿ ನಗರದ ಕಲ್ಕೆರೆ ಕೆರೆ ಬಳಿ ಮೃತದೇಹ ಬಿಸಾಕಿ ಹೋಗಿದ್ದಾರೆ.
ಘಟನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ