Belagavi NewsBelgaum NewsKannada NewsKarnataka NewsLatest

*ಭೀಕರ ಅಪಘಾತಕ್ಕೆ ವಿದ್ಯಾರ್ಥಿ ಬಲಿ*

ಪ್ರಗತಿವಾಹಿನಿ ಸುದ್ದಿ, ಹಾರೂಗೇರಿ: ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಬೈಕ್ ಗಳ ಮಧ್ಯೆ ನಡೆದ ಡಿಕ್ಕಿಯಲ್ಲಿ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮುಗಳಖೋಡದ ಅಮೋಘ ಸಪ್ತಸಾಗರ (18) ಮೃತ ವಿದ್ಯಾರ್ಥಿ. ಹಾರೂಗೇರಿ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಹಾರೂಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button