Kannada NewsKarnataka NewsNationalPolitics

*ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಸಂಸತ್‌ನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರ ಭಾಷಣದ ಬಗ್ಗೆ ಕಾಂಗ್ರೆಸ್‌ ಸಂಸದೆ ಸೋನಿಯಾಗಾಂಧಿ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶುಕ್ರವಾರ ನಡೆದ ಸಂಸತ್‌ ಜಂಟಿ ಅಧಿವೇಶನದಲ್ಲಿ ರಾಷ್ಟಪತಿ ದೌಪದಿ ಮುರ್ಮು ಅವರು ಭಾಷಣ ಮಾಡಿದ್ದರು, ಈ ಬಗ್ಗೆ ಸಂಸದೆ ಸೋನಿಯಾಗಾಂಧಿ, ಬಡಪಾಯಿ ಮಹಿಳೆ, ಭಾಷಣ ಮುಗಿಸುವಷ್ಟರಲ್ಲಿ ಬಹಳ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ಬಡಪಾಯಿ ಎಂದು ಹೇಳಿಕೆ ನೀಡಿದ್ದರು.

ಸೋನಿಯಾ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು ಇದೀಗ ಸುಧೀರ್ ಓಜಾ ಎಂಬ ವಕೀಲರೊಬ್ಬರು ಸಂಸದೆ ಸೋನಿಯಾ ಗಾಂಧಿ ವಿರುದ್ಧ ಸಿಜಿಎಂ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ಅದರಂತೆ ದೂರನ್ನು ಅಂಗೀಕರಿಸಿದ ನ್ಯಾಯಾಲಯವು ಫೆ.10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ.

ಸೋನಿಯಾ ಗಾಂಧಿ ಹೇಳಿಕೆ ನೀಡುವ ವೇಳೆ ಅವರ ಜೊತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು ಈ ಹಿನ್ನಲೆ ಅವರನ್ನು ಕೂಡ ಆರೋಪಿಗಳೆಂದು ಹೆಸರಿಸಲಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button