Kannada NewsKarnataka NewsNationalPolitics

*ಕಾಲೇಜಿಗೆ A++ ಗ್ರೇಡ್ ನೀಡಲು ಲಂಚ ಸ್ವೀಕಾರ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಆಂದ್ರದಲ್ಲಿ ಲಾಕ್*

ಪ್ರಗತಿವಾಹಿನಿ ಸುದ್ದಿ : ಕಾಲೇಜಿಗೆ A++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ್ದರು. ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸದ್ಯ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿದ್ದರು. ಅಲ್ಲದೇ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ.

ಇದಲ್ಲದೆ ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್ಟಾಪ್‌ಗಳು, ಐಫೋನ್ 16 ಪ್ರೊ. ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button