ಪ್ರಗತಿವಾಹಿನಿ ಸುದ್ದಿ: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.
ಆರಂಭದಲ್ಲಿ ಕೊಪ್ಪ ತಾಲೂಕಿನ ಖಾಂಡ್ಯ ಗ್ರಾಮದ ಯುವಕನಲ್ಲಿ ಕಾಣಿಸಿಕೊಂಡಿದ್ದ ಕೆ ಎಫ್ ಡಿ-ಮಂಗನ ಕಾಯಿಲೆ ಸೋಂಕು ಇದೀಗ 7 ಜನರಲ್ಲಿ ಪತ್ತೆಯಾಗಿದೆ. ಅದರಲ್ಲಿಯೂ ಎನ್ ಆರ್ ಪುರ ತಾಲೂಕಿನ ಮೇಲ್ಪಾರ್ ಗ್ರಾದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಎನ್ ಆರ್ ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಅಲರ್ಟ್ ಘೋಷಿಸಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ ಎಫ್ ಡಿ ಪೀಡಿತರಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ