ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ಅಡುಗೆ ಕೋಣೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ರಾಮನಗರ ಶಾಲೆಯಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಕೋಣೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಪೈಪ್ ಲೈನ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆ.
ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾರುಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮಕ್ಕಳು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ