Kannada NewsKarnataka NewsTravel

*ಕುಂಭಮೇಳಕ್ಕೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್: ಹುಬ್ಬಳ್ಳಿಯಿಂದ ವಾರಣಾಸಿಗೆ ನೇರ ರೈಲು*

ಪ್ರಗತಿವಾಹಿನಿ ಸುದ್ದಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ  ಮತ್ತು ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣಗಳ ನಡುವೆ  3 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 07383 ಎಸ್‌ಎಸ್‌ಎಸ್ ಹುಬ್ಬಳ್ಳಿ – ವಾರಣಾಸಿ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 14, 21 ಮತ್ತು 28, 2025 (ಶುಕ್ರವಾರ) ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು, ಭಾನುವಾರದಂದು ಬೆಳಿಗ್ಗೆ 05:30 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣ ತಲುಪಲಿದೆ.

Home add -Advt

ಪುನಃ ಇದೆ ರೈಲು (07384) ಫೆಬ್ರವರಿ 17, 24 ಮತ್ತು ಮಾರ್ಚ್ 3, 2025 (ಸೋಮವಾರ) ರಂದು ವಾರಣಾಸಿಯಿಂದ ಬೆಳಿಗ್ಗೆ 5:00 ಗಂಟೆಗೆ ಹೊರಟು, ಬುಧವಾರ 12:45 AM ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗ್ಲಿ, ಕಿರ್ಲೋಸ್ಕರವಾಡಿ, ಕರಾಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್ನಗರ, ಕೋಪರಗಾಂವ್, ಮನ್ಮಾಡ್, ಭೂಸಾವಲ್, ತಲ್ವಾಡ್ಯ, ಛನೆರಾ, ಖಿರ್ಕಿಯಾ, ಹರ್ದಾ, ಬಾನಾಪುರಾ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ, ಮಾಣಿಕಪುರ, ಪ್ರಯಾಗ್ ರಾಜ್ ಚಿಯೋಕಿ, ಮಿರ್ಜಾಪುರ ಮತ್ತು ಚುನಾರ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಬೋಗಿಗಳ ಸಂಯೋಜನೆ

ಈ ರೈಲುಗಳು 1 ಎಸಿ ಟು ಟೈರ್, 4 ಎಸಿ ತ್ರಿ ಟೈರ್, 11 ಸ್ಲೀಪರ್ ಕ್ಲಾಸ್, 1  ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಬ್ರೇಕ್ ವ್ಯಾನ್ ಮತ್ತು 1 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್ ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

Related Articles

Back to top button