Kannada NewsKarnataka News

ರಕ್ತ ದಾನ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ನಗರದಲ್ಲಿ ಇಂದು ರಕ್ತ ದಾನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಂಜಿಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ವಿಶ್ವ ಹಿಂದೂ ಪರಿಷತ್ ದೇಶವ್ಯಾಪಿ ರಕ್ತ ದಾನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯ ಕಾರ್ಯ. ದೇಹದಾನ ಮತ್ತು ರಕ್ತ ದಾನ ಅತ್ಯಂತ ಶ್ರೇಷ್ಠ ದಾನವಾಗಿವೆ.
ವಿಜ್ಞಾನ ಎಷ್ಟೇ ಮುಂದುವರಿದರೂ ರಕ್ತವನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಅದಕ್ಕಾಗಿ ಈ ಸಮಾರಂಭ ನಡೆಯುತ್ತಿದೆ ಎಂದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗಿ ಹಾಳಾಗಿ ಹೋಗದೆ, ಒಳ್ಳೆಯವರಾಗಿ ಬದುಕು ಸಾರ್ಥಕ ಮಾಡಿಕೊಳ್ಳಬೇಕೆಂದು ಹೇಳಿದರು.

ಆದರ್ಶ ಕೆಲಸ

ವಿಜಯ ಕನ್ಸ್ಟ್ರಕ್ಷನ್ಸ್ ಮಾಲಿಕ ವಿಜಯ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಈಗಿನ ಸಂದರ್ಭದಲ್ಲೂ ಇಂತಹ ಕಾರ್ಯಕ್ರಮಗಳಿಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಖುಷಿಯ ಸಂಗತಿ. ನಮ್ಮ ಸಂಸ್ಕೃತಿಯ ರಕ್ಷಣೆಯಲ್ಲಿ ಯುವಕರು ಸದಾ ಮುಂದಾಗಿ ತೊಡಗಿಸಿಕೊಳ್ಳಬೇಕು. ಯುವಕರಿಂದಲೇ ನಮ್ಮ ಸಮಾಜದ ರಕ್ಷಣೆ ಸಾಧ್ಯ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳು ಆದರ್ಶ ರೀತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ವಿಜಯ ಪಾಟೀಲ ಹೇಳಿದರು.
ಯೋಗ ತಜ್ಞ ಸಂಗಮೇಶ ಸವದತ್ತಿ ಅತಿಥಿಗಳಾಗಿ ಆಗಮಿಸಿದ್ದರು. ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳಾದ ಕೃಷ್ಣ ಭಟ್, ಸತೀಶ್ ಮಾಳವದೆ, ವಿಜಯ ಜಾಧವ, ಭಾವುಕಣ್ಣ ಲೋಹಾರ, ಬಸವರಾಜ ಹಳಿಂಗಳಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button