ಪ್ರಗತಿವಾಹಿನಿ ಸುದ್ದಿ: ಆದಾಯ ತೆರಿಗೆ ಇಲಾಖೆ-ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ್ದು, ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್, ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ನಿವಾಸ, ಇಟ್ಟಿಗೆ ಫ್ಯಾಕ್ಟರಿ ಸೇರಿ ವಿವಿಧೆಡೆ ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಒಟ್ಟು 30 ಕಡೆಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ