Karnataka News

*ಬೈಕ್-ಬಸ್ ಭೀಕರ ಅಪಘಾತ: ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುರಪುರದಿಂದ ತಿಂಥಣಿ ಕಡೆಗೆ ಹೊರಟಿದ್ದ ಬೈಕ್ ಗೆ ಬಸ್ ಡಿಕ್ಕಿಯಾಗಿ ಈ ಅಪಘಾತಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button