ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಗೇಮ್ ಗೀಳಿಗೆ ಬಿದ್ದ ಸ್ಟಾಫ್ ನರ್ಸ್ ಓರ್ವ ನಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.
30 ವರ್ಷದ ನಾಗರಾಜ್ ಶಿವಪ್ಪ ಉಳವಣ್ಣವರ್ ಮೃತ ವ್ಯಕ್ತಿ. ಐಐಟಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜ್ ಇತ್ತೀಚೆಗೆ ಆನ್ ಲೈನ್ ಗೇಮ್ ನಲ್ಲಿ ಹಣ ಹೂಡುವ ಅಭ್ಯಾಸ ಮಾಡಿಕೊಂಡಿದ್ದ. ಆನ್ ಲೈನ್ ಗೇಮ್ ನಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ.
ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿ ಮನನಿಒಂದು ನಾಗರಾಜ್, ಇದೀಗ ಮನೆಯಲ್ಲಿಯೇ ನೇಣಿಗೆ ಕೊರಳೊಡ್ದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ