ಪ್ರಗತಿವಾಹಿನಿ ಸುದ್ದಿ: ದೂರುದಾರ ಹಾಗೂ ಎಡಿಎಲ್ ಆರ್ ನಡುವಿನ ಜಾಗದ ವಿವಾದ ವಿಚಾರವಾಗಿ ಮಧ್ಯಪ್ರವೇಶ ಮಾಡದಿರಲು ಲಂಚಕ್ಕೆ ಕೈಯೊಡ್ಡಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
ಶೆಟ್ಟಿಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ಪತಿ ಶೇಖರ್ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮನೋಹರ್ ಅರಸ್ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಾರೆ.
ಮಾಗನೂರು ಗ್ರಾಮದ ನಿವಾಸಿ ಶಂಕರ್ ಎಂಬುವವರಿಂದ 8 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಮುಂಗಡವಾಗಿ 1 ಲಕ್ಷ ಪಡೆಯುತ್ತಿದ್ದಾಗ ಮಂಡ್ಯ ಲೋಕಾಯುಕ್ತ ಎಸ್ ಪಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ