Film & EntertainmentKannada NewsKarnataka News

*ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ಕಿಚ್ಚ ಸುದೀಪ್*

ಪ್ರಗತಿವಾಹಿನಿ ಸುದ್ದಿ : ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಇಂದು ಏಕಎಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್, ಕೆಲಕಾಲ ಸಮಾಲೋಚನೆ ನಡೆಸಿದರು.

ಸುದೀಪ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಶೂಟಿಂಗ್ ಗೆ ಯಾವುದೋ ಜಾಗದ ವಿಚಾರಕ್ಕೆ ಮಾತಾಡಲು ಬಂದಿದ್ದರು ಎಂದು ಸ್ಪಷ್ಟನೆ ನೀಡಿದರು.

ಸುದೀಪ್ ಭೇಟಿ ಖಾಸಗಿಯಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಹೇಳಿದರು.

ಡಿ.ಕೆ ಶಿವಕುಮಾರ್‌ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು ನಟ ಸುದೀಪ್ ಆಗಮಿಸಿದ್ದರು ಎನ್ನಲಾಗಿದೆ. ಫೆ. 8, 9ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಗಳು ನಡೆಯಲಿದೆ. ಫೆಬ್ರವರಿ 8 ರಂದು ಹೈದರಾಬಾದ್ ವಿರುದ್ಧ ಮೊದಲ ಪಂದ್ಯ ಆಡಲಿರುವ ಕರ್ನಾಟಕ ಬುಲ್ಲೋಜರ್ ತಂಡ ಮ್ಯಾಚ್‌ಗೆ ರೆಡಿಯಾಗುತ್ತಿದೆ. ಡಿಸಿಎಂ ನಿವಾಸದಿಂದ ತೆರಳಿದ ನಟ ಸುದೀಪ್ ಅವರ ಕಾರಲ್ಲೇ ನಲಪಾಡ್ ಕೂಡಾ ತೆರಳಿದ್ದಾರೆ ಎಂದು ಗೊತ್ತಾಗಿದೆ. ಸಿಸಿಎಲ್ ಉದ್ಘಾಟನೆಗೆ ಆಹ್ವಾನಿಸಲು ಡಿಕೆಶಿ ಮನೆಗೆ ಕಿಚ್ಚ ಬಂದಿದ್ದರು ಎನ್ನಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button