![](https://pragativahini.com/wp-content/uploads/2020/06/rape-case-rajastan.jpg)
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದಲೇ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.
13 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿ ಶಿಕ್ಷಕರನ್ನು ಬಂಧಿಸಲಾಗಿದೆ.
ಚಿನ್ನಸ್ವಾಮಿ, ಆರಮುಗಂ, ಪ್ರಕಾಶ್ ಬಂಧಿತ ಶಿಕ್ಷಕರು. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದಿರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆಯ ಮನೆಗೆ ಹೋಗಿ ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಪೋಷಕರು ವಿಷಯ ತಿಳಿಸಿ ಕಣ್ಣೀರಿಟ್ಟಿದ್ದಾರೆ.
ತಕ್ಷಣ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂತ್ರಸ್ತ ಬಾಲಕಿ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು, ಬಾರ್ಕೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ