ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಲದಲ್ಲಿ ಸಾಲು ಸಾಲು ಅಗ್ನಿ ಅವಘಡ ಸಂಭವಿಸುತ್ತಿದೆ. ಇಂದು ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ.
ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಹರಿಹರಾನಂದ ಸ್ವಾಮೀಜಿ ಉಳಿದುಕೊಂಡಿದ್ದ ಟೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಓಲ್ಡ್ ಜಿಟಿ ರಸ್ತೆಯ ತುಳಸಿ ಛೇದಕ ಬಳಿಯ ಶಿಬಿರದಲ್ಲಿ ಈ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ