ಪ್ರಗತಿವಾಹಿನಿ ಸುದ್ದಿ: 6 ವರ್ಷದ ಬಾಲಕನ ಮೇಲೆ ಟಿಪ್ಪರ್ ಲಾರಿ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ.
ಪ್ರೀತಮ್ (6) ಮೃತ ಬಾಲಕ. ಧಾರವಾಡ ಜಿಲೆಯ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಪ್ರೀತಮ್ ತನ್ನ ತಾಯಿ ಗೀತಾ ಜೊತೆ ಯತ್ನಳ್ಳಿಗೆ ಬಂದಿದ್ದ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗದಗ-ಲಕ್ಷ್ಮೀಶ್ವರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ