![](https://pragativahini.com/wp-content/uploads/2023/05/Laxman-Savadi-jpg.webp)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರ ಮೇಲಿನ ಮೂಡಾ ಹಗರಣ ವಿಚಾರವಾಗಿ ಸಿಬಿಐ ತನಿಖೆಗೆ ನಿರಾಕರಿಸಿರುವ ಹೈಕೋರ್ಟ್, ದೂರುದಾರರ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ಆದೇಶ ಬರುತ್ತಿದ್ದಂತೆ ಅಥಣಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು ನ್ಯಾಯಾಲಯದ ಆದೇಶ ಸಂತಸ ತಂದಿದೆ. ಸಿಎಂ ಅವರಿಗೆ ನ್ಯಾಯಾಲಯದ ಆದೇಶದ ಮೇಲೆ ಅಪಾರ ನಂಬಿಕೆ ಇತ್ತು. ಇಂದು ನ್ಯಾಯಾಲಯ ನೀಡಿದ ಆದೇಶವನ್ನು ನಾವೆಲ್ಲರೂ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದರು.
ಯಾವುದೆ ಹುರುಳಿಲ್ಲದ ಕೇಸ್ ಗಳನ್ನ ದಾಖಲು ಮಾಡಿ ಜನರ ದಿಕ್ಕು ತಪ್ಪಿಸುತ್ತಿರುವಂತವರಿಗೆ ನ್ಯಾಯಾಲಯದ ಆದೇಶ ತಕ್ಕ ಉತ್ತರ ನೀಡಿದೆ. ಈ ಆದೇಶದಿಂದ ಮತ್ತೆ ಸತ್ಯಮೇವ ಜಯತೆ ಅನ್ನುವ ಘೋಷ ವಾಕ್ಯ ಪುನಃ ಸಾಬಿತಾಗಿದೆ ಎಂದು ವಿರೋಧ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ