ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಆಮ್ ಅದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದಾರೆ.
ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇನ್ನು ಜಂಗ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮನೀಶ್ ಸಿಸೋಡಿಯಾ ಕೂಡ ಸೋಲನುಭವಿಸಿದ್ದಾರೆ. ದೆಹಲಿ ವಿಧನಸಭಾ ಚುನವಾಣೆಯಲ್ಲಿ ಆಮ್ ಆದ್ಮಿ ಪಕ್ಷ ಮುಖ ಭಂಗ ಅನುಭವಿಸಿದ್ದು, ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದೆ. 47 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಅರವಿಂದ್ ಕೇಜ್ರಿವಾಲ್ ವಿರುದ್ಧ ಗೆಲುವು ಸಾಧಿಸಿರುವ ಪರ್ವೇಶ್ ವರ್ಮಾ, ದೆಹಲಿ ಸಿಎಂ ಪಟ್ಟಕ್ಕೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ