![](https://pragativahini.com/wp-content/uploads/2025/02/harugeri-.jpg)
ಪ್ರಗತಿವಾಹಿನಿ ಸುದ್ದಿ: ತನ್ನ ತಂದೆಯ ಶವವನ್ನು ಪೊಲೀಸ್ ಠಾಣೆಯಲ್ಲಿ ಇಟ್ಟು ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿ ಸಿಪಿಐ ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಅಶೋಕ್ ಸದಲಗಿ ಎಂಬುವವರು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ತನ್ನ ತಂದೆ ಅಣ್ಣಪ್ಪ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ.
ಘಟನೆ ವಿವರ : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣಪ್ಪ ಸದಲಗಿ ಎಂಬುವವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಗೆ ಬಂದ ಸಂದರ್ಭದಲ್ಲಿ ಪಿಎಸ್ಐ ಮಾಳಪ್ಪ ಪೂಜಾರಿ ಹಲ್ಲೆ ನಡೆಸಿದ್ದಕ್ಕೆ ನನ್ನ ತಂದೆ ಮೃತಪಟ್ಟಿದ್ದಾನೆ ಎಂಬುದು ಮೃತ ವ್ಯಕ್ತಿ ಮಗನ ಆರೋಪ.
ನನ್ನ ತಂದೆಯ ಸಾವಿಗೆ ಪಿಎಸ್ಐ ಮಾಳಪ್ಪ ಪೂಜಾರಿ ಕಾರಣ ಇದ್ದು ನಮಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ