![](https://pragativahini.com/wp-content/uploads/2024/09/accident.jpg)
ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ಕೆಲಸ ಮಾಡುತ್ತಿದ್ದವರ ಮೇಲೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರತ ಸಂಭವಿಸಿದೆ.
ಟ್ರಕ್ ಚಾಲಕ ಕಿರಿದಾದ ತಿರುವು ಮೂಲಕ ಚಲಿಸಲು ಪ್ರಯತ್ನಿಸುತ್ತಿದ್ದ ಈ ವೇಳೆ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದುಇ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಬಿದ್ದಿದೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಜೆಸಿಬಿ ಮೂಲಕ ಅವಶೇಷಗಳಡಿ ಸಿಲುಕಿದ್ದ ಶವಗಳನ್ನು ಹೊರ ತೆಗೆಯಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ