![](https://pragativahini.com/wp-content/uploads/2024/01/Accident-2-6.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪಘಾತದಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಬೈಕ್ ಸವಾರ ಬಸ್ ಕೆಳಗೆ ಸಿಲುಕಿ ಅಪ್ಪಚ್ಚಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೊಮ್ಮನಹಳ್ಳಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ ಕೆಳಗೆ ಸಿಲುಕಿಕೊಂಡಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಸ್ ಕೆಳಗೆ ಸಿಲುಕಿದ್ದ ಸವಾರನನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ.
ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ