
ಪ್ರಗತಿವಾಹಿನಿ ಸುದ್ದಿ: ಕಾಶಿ ಯಾತ್ರೆಗೆ ತೆರಳಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರು ನದಿಯಲ್ಲಿ ಸ್ನಾನಮಾಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸತೀಶ್ ಜೋಶಿ (44) ಮೃತ ವ್ಯಕ್ತಿ. ಒಂದು ವಾರದ ಹಿಂದೆ ಸತೀಶ್ ಜೋಶಿ ಪ್ರಯಾಗ್ ರಾಜ್ ನ ಮಹಾಕುಂಭಮೇಲಕ್ಕೆ ತೆರಳಿದ್ದರು. ಕುಂಭಮೇಲ ಮುಗಿಸಿಕೊಂಡು ಅಲ್ಲಿಂದ ಕಾಶಿಗೆ ತೆರಳಿದ್ದರು. ಕಾಶಿಯಲ್ಲಿ ನದಿಯಲ್ಲಿ ಸ್ನಾನಮಾಡುವಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸತೀಶ್ ಜೋಶಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರಿ ಕೆಲಸ ಮಾಡುತ್ತಿದ್ದರು. ಸತೀಶ್ ಜೋಶಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.