![](https://pragativahini.com/wp-content/uploads/2020/10/arrest1.jpg)
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯ ಗೇಟ್ ಮುರಿದು ಒಳ ನುಗ್ಗಿದ ಕಳ್ಳರು ಠಾಣೆಯಲ್ಲಿ ನಿಲ್ಲಿಸಿದ್ದ ಬೈಕ್ ನೇ ಕದ್ದು ಪರಾರಿಯಾಗಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ.
ತಡರಾತ್ರಿ ಇಬ್ಬರು ಕಳ್ಳರು ಪೊಲೀಸ್ ಠಾಣೆಯ ಗೇಟ್ ಬೀಗ ಮುರಿದು ಒಳ ನುಗ್ಗಿದ್ದು, ಎನ್ ಡಿಪಿಎಸ್ ಪ್ರಕರಣದಲ್ಲಿ ಜಪ್ತಿಯಾಗಿದ್ದ ಬೈಕ್ ನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಕೈ ಚಳಕ ಪೊಲೀಸ್ ಠಾಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಳಿಗ್ಗೆ ಠಾಣೆಗೆ ಬಂದು ನೋಡಿದಾಗ ಜಪ್ತಿಯಾಗಿದ್ದ ಹೋಂಡಾ ಶೈನ್ ಬೈಕ್ ನಾಪತ್ತೆಯಾಗಿದೆ. ಸಿಸಿಟಿವಿ ಪರಿಶೀಲಿಸಿ ತನಿಖೆ ನಡೆಸಿದ ಪೊಲೀಸರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ.
ಅರ್ಫಾಜ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು. ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ