![](https://pragativahini.com/wp-content/uploads/2025/02/vijayendra-.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್ ಹಾಕಲು ಮುಂದಾದಂತಿದೆ. ಒಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೂ ಶಾಕ್ ನೀಡಿದೆ. ಜಿಲ್ಲಾಧ್ಯಕ್ಷರ ನೇಮಕಕ್ಕೆ ತಡೆ ನೀಡಿದೆ.
ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಬಳಿಕ ಸಂಸದ ಡಾ.ಕೆ.ಸುಧಾಕರ್, ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇಸಿಡಿದೆದ್ದಿದ್ದರು. ಇನ್ನು ಸಹನೆಯ ಮಾತಿಲ್ಲ, ಏನಿದ್ದರೂ ಯುದ್ಧವೇ ಎಂದು ಹೇಳುವ ಮೂಲಕ ಸವಾಲು ಹಾಕಿದ್ದರು. ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆ ಬಿಜೆಪಿ ಪಾಳಯದಲ್ಲಿ ಭಾರಿ ಚರ್ಚೆಗೂ ಕಾರಣವಾಗಿತ್ತು. ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತಡೆ ನೀಡಿದೆ.
ಈ ಬಗ್ಗೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಪತ್ರ ಬರೆದು ಚಿಕ್ಕಬಳ್ಳಾಪುರ ಬಿಜೆಪಿ ಘಟಕದ ಜಿಲ್ಲಾಧ್ಯಕ್ಷ ಬಿ.ಸಂದೀಪ್ ಆಯ್ಕೆಗೆ ತಡೆ ನೀಡುವಂತೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ