*ವಿಡಿಯೋ ಸಂವಾದದ ಮೂಲಕ ಸಿಎಂ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳಕರ್*
![](https://pragativahini.com/wp-content/uploads/2025/02/Budget-meeting.jpg)
![](https://pragativahini.com/wp-content/uploads/2025/02/IMG_20250210_221854_650_x_350_pixel.jpg)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ಸೋಮವಾರ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸಚಿವರು ಪ್ರಸ್ತಾಪಿಸಿದರು.
ವಿಡಿಯೋ ಸಂವಾದಲ್ಲಿ ಇಲಾಖೆಯ ಹಾಗೂ ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಸುಮಾರು ಒಂದು ವಾರದಿಂದ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಸೋಮವಾರ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜೊತೆಗೆ ಇನ್ನೂ ಹಲವು ಇಲಾಖೆಗಳ ಸಭೆ ನಿಗದಿಯಾಗಿತ್ತು.
ಆದರೆ, ಅಪಘಾತದಲ್ಲಿ ಗಾಯಗೊಂಡು ವಿಶ್ರಾಂತಿಯಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಭೆಯಲ್ಲಿ ನೇರವಾಗಿ ಪಾಲ್ಗೊಳ್ಳಲು ಸಾಧ್ಯವಾಗದ್ದರಿಂದ ವಿಡಿಯೋ ಸಂವಾದದ ಮೂಲಕ ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ