![](https://pragativahini.com/wp-content/uploads/2022/04/extreme_heat_thermometer.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನ ಹೆಚ್ಚಳವಾಗಿದೆ. ಬಿಸಿಲ ಹೊಡೆತ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವಾರಾತ್ಯಂತದಲ್ಲಿ ಕೆಲ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ರಾಯಚೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಈಗಿನ ತಾಪಮಾನಕ್ಕಿಂತ ಗರಿಷ್ಠ ತಾಪಮಾನ 3-4 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿಯೂ ಬಿಸಿಲು ಪ್ರಮಾಣ ಹೆಚ್ಚಾಗಲಿದೆ
ಬೆಳಗಾವಿಯಲ್ಲಿ ಗರಿಷ್ಠ್ ಉಷ್ಣಾಂಶ 32.0 ಡಿಗ್ಸಿ ಸೆಲ್ಸಿಯ, ಬೀದರ್ 33.0 ಡಿಗ್ರಿ ಸೆಲ್ಸಿಯಸ್, ವಿಜಯಪುರ 32, ಬಾಗಲಕೋಟೆ 33.7 ಡಿಗ್ರಿ, ಧಾರವಾಡ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ