![](https://pragativahini.com/wp-content/uploads/2019/07/train-e1562385812606.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ, ದರೋಡೆ, ಕೊಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮೈಸೂರು-ಬೆಂಗಳೂರು ಮೆಮೊ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು ಹೆದರಿಸಿ, ಬೆದರಿಸಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.
ಪ್ರಯಾಣಿಕರ ಸೋಗಿನಲ್ಲಿ ರೈಲು ಹತ್ತಿದ್ದ ಐವರು ದರೋಡೆಕೋರರ ಗುಂಪು, ಮಂಡ್ಯ ಬಳಿ ರೈಲು ಬರುತ್ತಿದ್ದಂತೆ ಪ್ರಯಾಣಿಕರಿಗೆ ಚಾಕು ತೋರಿಸಿ 12,000 ನಗದು ಹಣ, 5 ಮೊಬೈಲ್ ಗಳನ್ನು ದೀಚಿಸಿದ್ದಾರೆ.
ತಕ್ಷಣ ಪ್ರಯಾಣಿಕರೊಬ್ಬರು ರೈಲ್ವೆ ಪೊಲೀಸರಿಗೆ ಸಂದೇಶ ರವಾನಿಸಿದ್ದಾರೆ. ಚನ್ನಪಟ್ಟಣ ಬಳಿ ರೈಲ್ವೆ ಪೊಲೀಸರು ದರೋಡೆಕೋರರನ್ನು ಸೆರೆಹಿಡಿಯಲು ಮುಂದಾಗುತ್ತಿದ್ದಂತೆ ಪೊಲೀಸರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ