ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಸತ್ಯೇಂದ್ರ ದಾಸ್ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 85 ವರ್ಷ ವಯಸ್ಸಿನ ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು.
1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ ಸತ್ಯೇಂದ್ರ ದಸ್ ಅವರು ತತಕಾಲಿಕವಾಗಿ ರಾಮ ಮಂದಿರದ ಅರ್ಚಕರಾಗಿದ್ದರು. ಶ್ರೀರಾಮನ ಪರಮ ಭಕ್ತರಾಗಿದ್ದ, ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಾಗಿದ್ದ ಸತ್ಯೇಂದ್ರ ದಾಸ್ ಅವರ ನಿಧನ ಸುದ್ದಿ ಅತೀವ ದು:ಖ ತಂದಿದೆ. ಅವರ ಅಗಲಿಕೆ ಆಧ್ಯಾತ್ಮ ಜಗತ್ತಿಗೆ ತುಂಬಲಾರದ ನಷ್ಟ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ