![](https://pragativahini.com/wp-content/uploads/2022/08/Breaking-News.jpg)
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೊರಡಿಸಲು ಉದ್ದೇಶಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.
ರಾಜ್ಯ ಸರಕಾರ ಸುಗ್ರೀವಾಜ್ಞೆಯನ್ನು ಕಳೆದ ವಾರ ರಾಜ್ಯಪಾಲರಿಗೆ ಕಳಿಸಿತ್ತು. ಆದರೆ ರಾಜ್ಯಪಾಲರು ಕೆಲವು ವಿವರ ಕೇಳಿ ವಾಪಸ್ ಕಳಿಸಿದ್ದರು. ನಂತರ ಸರಕಾರ ಮತ್ತಷ್ಟು ವಿವರಗಳೊಂದಿಗೆ ರಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025” ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎಂಬ ಭರವಸೆ ನನಗಿದೆ ಎದು ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ